ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆದಿದ್ದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಪಕ್ಷದವರೇ ಸಿದ್ದರಾಮಯ್ಯನವರ ಸ್ಟಿಂಗ್ ಆಪರೇಷನ್ನಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇದರ ಮಧ್ಯೆ ಇದೀಗ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಕಾಂಗ್ರೆಸ್ನ ಮೊದಲ ವಿಕೆಟ್ ಪತನವಾದಂತಾಗಿದೆ. ಬೆಂಗಳೂರು, (ಅಕ್ಟೋಬರ್ 30): ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದೊಂದು ಕಟ್ಟು ಕಥೆ ಎಂದು ಸಿಸಿಬಿ ಮಾಧ್ಯಮ ಪ್ರಕಟಣೆ ಮೂಲಕ ಅಧಿಕೃತವಾಗಿ ತಿಳಿಸಿದೆ.