ಧನ್ವೀರ್ ಸಹ ಕೆಲ ಮಾಧ್ಯಮಗಳಲ್ಲಿ ಮತ್ತು ಕೆಲವರೊಟ್ಟಿಗೆ ಖಾಸಗಿಯಾಗಿ ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಕೆಲ ಹೇಳಿಕೆಗಳನ್ನು ನೀಡಿದ್ದರು. ಅದರ ಬೆನ್ನಲ್ಲೆ ನಟ ದರ್ಶನ್, ಜೈಲಿನಿಂದಲೇ ಧನ್ವೀರ ವಿರುದ್ಧ ನಿರ್ಬಂಧಕಾಜ್ಞೆ ಹೊರಡಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ಬಗ್ಗೆ ನಟ ದರ್ಶನ್ ಪರ ವಕೀಲರು ಮಾಧ್ಯಮಗಳ ಬಳಿ ಮಾತನಾಡಿದ್ದಾರೆ. ಧನ್ವೀರ್ ಹಾಗೂ ವಿಜಯಲಕ್ಷ್ಮಿ ದರ್ಶನ್ ನಡುವಿನ ಜಟಾಪಟಿ ನ್ಯಾಯಾಲಯದ ಮೆಟ್ಟಿಲೇರಿದೆ. ಇಬ್ಬರ ನಡುವೆ ಮುನಿಸು ತೀವ್ರಗೊಂಡ ಹಿನ್ನೆಲೆಯಲ್ಲಿ ಧನ್ವೀರ್ ಗೌಡ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ಮತ್ತು ದರ್ಶನ್ಗೆ ಆಪ್ತರಾಗಿದ್ದ ಕೆಲವರು ದೂರುಗಳನ್ನು ದಾಖಲು ಮಾಡಿದ್ದರು.