Rajyothsava Award: ಕಲೆ, ಸಾಹಿತ್ಯ, ಸಮಾಜ ಸೇವೆ, ಶಿಕ್ಷಣ, ಸಂಗೀತ ಹೀಗೆ ಹಲವು ವಿಭಾಗಗಳಲ್ಲಿ ಸೇವೆ ಮಾಡಿದ ವಿಶೇಷ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಡಗಡಿ ಅವರು ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಸೇವೆ ಸಲ್ಲಿಸಿದ ಮೂವರಿಗೆ ಪ್ರಶಸ್ತಿ ದೊರಕಿದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಣೆ ಮಾಡಿದೆ. ಈ ಬಾರಿ 71 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಚಲನಚಿತ್ರ ಮತ್ತು ಕಿರುತೆರೆ ವಿಭಾಗದಲ್ಲಿ ಸೇವೆ ಸಲ್ಲಿಸಿರುವ ಮೂವರನ್ನು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.