ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಖತರ್ನಾಕ್ ವಂಚಕ ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ 200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ನ ಹಾಟ್ ಬೆಡಗಿ ನೋರಾ ಫತೇ. ದೆಹಲಿಯ ರೌಸ್ ಅವೆನ್ಯೂ ಕೋರ್ಟ್ ನವೆಂಬರ್ 2 ರಂದು ಖುದ್ದಾಗಿ ಹಾಜರಾಗುವಂತೆ ನೋರಾ ಫತೇಹಿಗೆ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೂರನೇ ಪೂರಕ ದೋಷಾರೋಪ ಪಟ್ಟಿಯಲ್ಲಿ ನಟಿಯನ್ನು ಪ್ರಾಸಿಕ್ಯೂಷನ್ ಸಾಕ್ಷಿ ಎಂದು ಹೆಸರಿಸಲಾಗಿದೆ. ಇದರಿಂದಾಗಿ ಸುಕೇಶ್ ವಿರುದ್ಧ ನಟಿ ಕೋರ್ಟ್ನಲ್ಲಿ ಯಾವೆಲ್ಲಾ ಸ್ಫೋಟಕ ಸತ್ಯಗಳನ್ನು ಬಿಚ್ಚಿಡಲಿದ್ದಾರೆ ಎಂಬ ಕುತೂಹಲ ಮೂಡಿದೆ..ಜೈಲಿನಲ್ಲಿ ಕೂತೇ 200 ಕೋಟಿ ಪಂಗನಾಮ ಹಾಕಿದ್ದ ಕಿಲಾಡಿ!