ಮೈಸೂರು ರಾಜಮನೆತನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇತಿಹಾಸ ಅರಿತು ಮಾತನಾಡಬೇಕು ಎಂದು. ಅನುಭವವಿಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ಈ ಬೆಳವಣಿಗೆಯೇ ಸಾಕ್ಷಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರಿನ ಇತಿಹಾಸ ತಿಳಿಯದವರಂತೆ ಮಾತನಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರಿನ ಇತಿಹಾಸ ಹಾಗೂ ರಾಜಮನೆತನದ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರನ್ನು ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದ್ದೆವು. ಅಂದು ಅವರು ಪ್ರಚಾರಕ್ಕೆ ಬಂದಿರದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸುವುದು ಕಷ್ಟವಾಗುತ್ತಿತ್ತು.