ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಸಾಮರ್ಥ್ಯ ವೃದ್ಧಿ ವೆಚ್ಚ ವಿಧಿಸುವ ಪ್ರಸ್ತಾವನೆ ಕೈಬಿಡಬೇಕು. ಹೊಸ ವಿದ್ಯುತ್ ಉಪಕೇಂದ್ರಗಳ ನಿರ್ಮಾಣಕ್ಕೆ ಕಾಲಮಿತಿ ನಿಗದಿಪಡಿಸಿ, ಕಾರ್ಯಸಾಧ್ಯತ. ವಿದ್ಯುತ್ ಸಂಪರ್ಕಕ್ಕಾಗಿ ಸಾಮರ್ಥ್ಯ ವೃದ್ಧಿ ವೆಚ್ಚವನ್ನು ಕೈಗಾರಿಕೆಗಳಿಂದಲೇ ಭರಿಸುವಂತೆ ಮಾಡುವುದರಿಂದ ಉದ್ಯಮಗಳಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟರು.ಹೊಸ ವಿದ್ಯುತ್ ಉಪಕೇಂದ್ರಗಳ ನಿರ್ಮಾಣಕ್ಕೆ ಎರಡು ವರ್ಷಗಳ ಕಾಲಮಿತಿ ನಿಗದಿಪಡಿಸುವುದು, ಕಾರ್ಯಸಾಧ್ಯತಾ ವರದಿ ಒದಗಿಸುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಹಾಗೂ ವಿದ್ಯುತ್ ಸಂಬಂಧಿತ ವಿವಾದಗಳನ್ನು ಪರಿಹರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಹಲವು ವಿಷಯಗಳನ್ನು ಆಯೋಗದ ಗಮನಕ್ಕೆ ತಂದರು.