ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವ ಮತ್ತು ಅನಾಥವಾಗಿಸುವ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರ ಹೊಸ ಮಸೂದೆ ಸಿದ್ಧಪಡಿಸಿದ್ದು, ತಪ್ಪಿತಸ್ಥರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಲು ಪ್ರಸ್ತಾಪಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದಲ್ಲಿ ಹಿರಿಯ ನಾಗರಿಕರ ವಿರುದ್ಧದ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಹೊಸ ಮಸೂದೆಯ ಅಗತ್ಯ ಹೆಚ್ಚಿದೆ ಎನ್ನಲಾಗಿದೆ. ಬೆಂಗಳೂರು, ಅಕ್ಟೋಬರ್ 31: ಹಿರಿಯ ನಾಗರಿಕರನ್ನು ದೌರ್ಜನ್ಯ ಮತ್ತು ನಿರ್ಲಕ್ಷ್ಯದಿಂದ ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ಸಿದ್ಧಪಡಿಸಿದೆ. ಹಿರಿಯ ನಾಗರಿಕರನ್ನು ಅನಾಥವಾಗಿಸುವ ಪ್ರಕರಣಗಳಲ್ಲಿ 2 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.