ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಷಯಗಳು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಇಂಡಿಯಾ ಒಕ್ಕೂಟದ ನಾಯಕರು ಚರ್ಚಿಸಲು ಮುಂದಾಗಿದ್ದಾರೆ. ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ ಮಹತ್ವದ ಸಭೆ ಬುಧವಾರ ನವದೆಹಲಿಯಲ್ಲಿ ನಡೆಯಲಿದ್ದು, ಈ ಸಭೆಗೂ ಮುನ್ನವೇ ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಹಾಕಲಾಗಿರುವ ವಿವಾದಾತ್ಮಕ ಪೋಸ್ಟರ್ ಹಾಗೂ ಹೋರ್ಡಿಂಗ್ಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿವೆ. ಪ್ರಮುಖವಾಗಿ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚಿಸಲು ವಿರೋಧ ಪಕ್ಷದ ಮುಖಂಡರು ಸಜ್ಜಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.