ಮಂಗಳೂರು (ಆ.16) ದಕ್ಷಿಣ ಕನ್ನಡದಲ್ಲಿ ನಾಳೆ (ಆಗಸ್ಟ್ 17) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ನಾಗರ ಪಂಚಮಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ವಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳಿಗೂ ಒಂದು ದಿನದ ರಜೆ ಘೋಷಿಸಲಾಗಿದೆ. ಸೋಮವಾರ ನಾಗರಪಂಚಮಿ ಹಬ್ಬ ಆಚರಣೆ ಹಿನ್ನಲೆಯಲ್ಲಿ ಈ ನಿರ್ಧಾರ ಘೋಷಣೆಯಾಗಿದೆ. ಉಡುಪಿಯಲ್ಲೂ ನಾಳೆ ಸಾರ್ವತ್ರಿಕ ರಜೆ ನಾಗರ ಪಂಚಮಿ ಹಿನ್ನೆಲೆ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.