ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ಮುಕ್ತಾಯದ ನಂತರ WTC 2025-27 ಅಂಕಪಟ್ಟಿಯಲ್ಲಿ ಭಾರಿ ಬದಲಾವಣೆಗಳಾಗಿವೆ. ಆಫ್ರಿಕಾ 2ನೇ ಸ್ಥಾನಕ್ಕೇರಿದರೆ, ಆಸ್ಟ್ರೇಲಿಯಾ 3ಕ್ಕೆ ಕುಸಿದಿದೆ. ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದೆ. ಭಾರತ 4ನೇ ಸ್ಥಾನದಲ್ಲಿದ್ದು, ಫೈನಲ್ ಪ್ರವೇಶಿಸಲು ಉಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವುದು ಕಡ್ಡಾಯ. ಅದರಲ್ಲೂ ನ್ಯೂಜಿಲೆಂಡ್ ಸರಣಿ ನಿರ್ಣಾಯಕವಾಗಿದ್ದು, ತಪ್ಪುಗಳಿಗೆ ಅವಕಾಶವಿಲ್ಲ. ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಪ್ರದರ್ಶನ ನೀಡಿದೆ.