ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 5ನೇ T20 ಪಂದ್ಯ ಹ್ಯಾಮಿಲ್ಟನ್ನಲ್ಲಿ ಭಾನುವಾರ ನಡೆಯಲಿದೆ. ಭಾರತ 3-1 ರಿಂದ ಸರಣಿ ಗೆಲ್ಲಲು ಗುರಿ ಹೊಂದಿದ್ದರೆ, ನ್ಯೂಜಿಲೆಂಡ್ ಗೆಲುವಿನೊಂದಿಗೆ ಸರಣಿ ಮುಗಿಸಲು ಎದುರು ನೋಡುತ್ತಿದೆ. ಕಳೆದ ಪಂದ್ಯದಲ್ಲಿ ಭಾರತದ ಬೌಲರ್ಗಳು ದುಬಾರಿಯಾಗಿದ್ದು, ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವುದು ಮುಖ್ಯ. ಪಂದ್ಯದ ಸಮಯ, ಸ್ಥಳ ಮತ್ತು ನೇರ ಪ್ರಸಾರದ ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಭಾನುವಾರ ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.