ನವದೆಹಲಿ: ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ. ನವದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಸಾರ್ವಜನಿಕ ಮಹಾಭಿಯೋಗ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, ಸಿಇಸಿ ಜ್ಞಾನೇಶ್ ಕುಮಾರ್ ಹುದ್ದೆಯಲ್ಲಿ ಮುಂದುವರಿಯದಂತೆ ತಡೆಯಲು ತಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ಬಳಸಿ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.ರಾಹುಲ್ ಗಾಂಧಿ ಮಾತು!ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ಉಳಿಯುವುದಿಲ್ಲ.