ಕಾರವಾರ: ಭಟ್ಕಳ ಶಿರಾಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸದೇ ಇದ್ದರೆ ನ.2 ರಿಂದ ಒಪಿಡಿ ಸೇವೆಗಳನ್ನು ಸ್ಥಗಿತ ಮಾಡುವುದಾಗಿ ಕರ್ನಾಟಕ ಸರ್ಕಾರಿ ವ. ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಜಿಪಂ ಸಿಇಒ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ ನಂತರ ಸಂಘದ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಡಿಎಚ್ಒ ಡಾ.ಸಂಜಯ ದೊಡ್ಮನಿ ಮಾತನಾಡಿ, ಅ.28 ರಂದು ಭಟ್ಕಳದಲ್ಲಿ ಘಟನೆ ನಡೆದಿದೆ. ಇದು ಸರ್ಕಾರಿ ಆಸ್ಪತ್ರೆಗಳ ವೈದ್ಯರಲ್ಲಿ ಆತಂಕ ಸೃಷ್ಟಿ ಮಾಡಿದೆ. ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಾಗಿ ನಾಲ್ಕು ದಿನವಾದರೂ ಆರೋಪಿಗಳನ್ನು ಬಂಧನ ಮಾಡದೇ ಇರುವುದು ಖಂಡನೀಯ.