ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ ಒಂದೇ ಒಂದು ಪಂದ್ಯದಲ್ಲೂ ಗೆಲ್ಲದೆ ತನ್ನ ಅಭಿಯಾನವನ್ನು ಅಂತ್ಯಗೊಳಿಸಿದೆ. ಮೊದಲು ಪಾಕಿಸ್ತಾನದ ವಿರುದ್ಧ, ಆ ಬಳಿಕ ಯುಎಇ ಹಾಗೂ ಇಂಗ್ಲೆಂಡ್ ವಿರುದ್ಧ ಸೋತಿದ್ದ ಟೀಮ್ ಇಂಡಿಯಾ ಕೊನೆಯ ಮ್ಯಾಚ್ನಲ್ಲಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯ ಬೌಲ್ ಪ್ಲೇಆಫ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಮೌಂಗ್ ಕಾಕ್ನ ಮಿಷನ್ ರೋಡ್ ಗ್ರೌಂಡ್ನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಕೃನಾಲ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು.