ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ 'ಪ್ರಜಾಸೇವಾ' ವಿಶೇಷ ಅಭಿಯಾನದ ಮೂಲಕ 590 ಅರ್ಹ ಆಸ್ತಿ ಮಾಲೀಕರಿಗೆ ಇ-ಖಾತಾ ವಿತರಿಸಲಾಗಿದೆ. ನಾಗರಿಕರಿಗೆ ತ್ವರಿತವಾಗಿ ಆಸ್ತಿ ದಾಖಲೆಗಳನ್ನು ಒದಗಿಸುವ ಮತ್ತು ದೀರ್ಘಕಾಲದ ಖಾತಾ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯ ಈ ಡಿಜಿಟಲ್ ಹೆಜ್ಜೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಮೈಸೂರು, ನವೆಂಬರ್ 01: ಆಸ್ತಿ ದಾಖಲೆಗಳ ಸರಳೀಕರಣ ಮತ್ತು ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ 'ಪ್ರಜಾಸೇವಾ' ವಿಶೇಷ ಅಭಿಯಾನವು ಯಶಸ್ವಿಯಾಗಿದೆ. ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಅರ್ಹ 590 ಆಸ್ತಿ ಮಾಲೀಕರಿಗೆ ಇ-ಖಾತಾ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.