ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಇಂಡಿ' ಬಣವು 'ವೋಟ್ ಬಚಾವೋ, ದೇಶ್ ಬಚಾವೋ' ಬೃಹತ್ ರ್ಯಾಲಿ ನಡೆಸಿದೆ. ಚುನಾವಣಾ ಅಕ್ರಮಗಳು ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. 4,000 ಪೊಲೀಸರು ಮತ್ತು 200 ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ರಾಹುಲ್ ಗಾಂಧಿ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ನವದೆಹಲಿ, ನವೆಂಬರ್ 1: ಇಂಡಿ ಬಣವು ಇಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಗೆ ಸಜ್ಜಾಗಿದೆ.