ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ಗಾಂಧಿ ಹತ್ಯೆಯ ಸತ್ಯ ನಾಟಕ ಪ್ರದರ್ಶನ ವೇಳೆಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ. ಈ ವೇಳೆ ಗಲಾಟೆ ಗದ್ದಲವಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.ಈ ಸಂಬಂಧ ಎರಡು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು, ನವೆಂಬರ್ 01): ಬನಶಂಕರಿಯ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ʻಗಾಂಧಿ ಹತ್ಯೆಯ ಸತ್ಯʼ ನಾಟಕ ಪ್ರದರ್ಶನದ ವೇಳೆ ಏರ್ಪಟ್ಟ ಗದ್ದಲದ ವೇಳೆ ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ.