ಶಿವಪ್ರಸಾದ್ ಅರ್ಜುನಹಳ್ಳಿ, ಬೆಂಗಳೂರುರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆಯ ಕಾವು ದಿನೇದಿನೆ ಏರುತ್ತಿರುವ ನಡುವೆಯೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹಾಲಿ ಸಚಿವರ ಭವಿಷ್ಯ ನ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಆಧರಿಸಿ ಸಚಿವರ ಮೌಲ್ಯಮಾಪನ ನಡೆಸಲು ಹೈಕಮಾಂಡ್ ನಿರ್ಧರಿಸಿರುವುದು ಹೊಸ ಬೆಳವಣಿಗೆ. ತಮ್ಮ ತಮ್ಮ ಜಿಲ್ಲೆಗಳಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಜತೆಯಲ್ಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಗೆಲುವು ತಂದುಕೊಡುವ ಜವಾಬ್ದಾರಿಯನ್ನು ವರಿಷ್ಠರು ಸಚಿವರ ಹೆಗಲ ಮೇಲೆ ಹೊರಿಸಿದ್ದಾರೆ. ಸಚಿವ ಸ್ಥಾನದಲ್ಲಿ ಮುಂದುವರಿಯಲು ಹಾಲಿ ಮಂತ್ರಿಗಳು ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಲೇಬೇಕು.