Minister Madhu Bangarappa participated in Kannada Rajyotsava celebration, News News, Times Now Kannada. Madhu Bangarappa: ಬೆಂಗಳೂರು: ಕನ್ನಡಿಗರ ಪಾಲಿಗೆ ನವೆಂಬರ್ 1 ಕೇವಲ ಒಂದು ದಿನಾಂಕವಲ್ಲ. ಇದು ನಮ್ಮ ನಾಡಿನ ಇತಿಹಾಸ, ಭಾಷೆಯ ಅಸ್ತಿತ್ವ, ಸಂಸ್ಕೃತಿಯ ವೈಭವ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತದ ದಿನ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.