ನಕಲಿ ಪಾನ್ ಕಾರ್ಡ್ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಅವರು ಮತ್ತೆ ಬಂಧಿತರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಸ್ಪಿ ಮುಖಂಡನನ್ನು ಬಂಧಿಸಿದ್ದಾರೆ. ಅವರನ್ನು 14 ದಿನ ಜುಡಿಶಿಯಲ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ನವದೆಹಲಿ, ನವೆಂಬರ್ 1: ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಮೊಹಮ್ಮದ್ ಅಜಮ್ ಖಾನ್ (Mohammad Azam Khan) ಅವರಿಗೆ ಕಾನೂನು ಸಂಕಷ್ಟ ಮುಂದುವರಿದಿದೆ.