ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ಮನೆಯಲ್ಲಿ ಮೊಬೈಲ್ ಎಕ್ಸ್ಚೇಂಜ್ ನಡೆದಿದೆ ಎಂದು ಆರೋಪಿ ಹೇಳಿಕೆ ನೀಡಿದ್ದಾನೆ. ಈ ಸಂಬಂಧ ಕುಮಾರಸ್ವಾಮಿ ಅವರ ಆಪ್ತರು ತನಿಖೆಗೆ ಹಾಜರಾಗದೆ ಅಬ್ಸ್ಕಾಂಡ್ ಆಗಿದ್ದಾರೆ. ತನಿಖೆಗೆ ಸಹಕರಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಬೆಂಗಳೂರು, ನ.1: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮನೆಯಲ್ಲಿ ಆರೋಪಿ ಮೊಬೈಲ್ ಎಕ್ಸ್ಚೇಂಜ್ ಮಾಡಿದ್ದಾನೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಕುರಿತು ಆರೋಪಿ ತನಿಖಾಧಿಕಾರಿಗಳ ಎದುರು ಹೇಳಿಕೆ ನೀಡಿರುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.