ಕಷ್ಟ ಪಟ್ಟು ದುಡಿಯುವ ವ್ಯಕ್ತಿಗಳ ಮುಖದಲ್ಲಿ ನಗು ಮೂಡಿಸಿದರೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಆರ್ಡರ್ ತಲುಪಿಸಲು ಬಂದ ಡೆಲಿವರಿ ಬಾಯ್ಗೆ ಮನೆ ಮಂದಿ ಸೇರಿ ವ್ಯಾಲೆಟ್ ಉಡುಗೊರೆ ನೀಡಿ ಯುವಕನ ಮೊಗದಲ್ಲಿ ನಗು ತರಿಸಿದ್ದಾರೆ. ಡೆಲಿವರಿ ಬಾಯ್ನ ಶ್ರಮವನ್ನು ಶ್ಲಾಘಿಸಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಡೆಲಿವರಿ ಬಾಯ್ (delivery boy) ಆಗಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಕೆಲವೇ ಕೆಲವು ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಿದ ಫುಡ್ ಬರುವುದರ ಹಿಂದೆ ಆಹಾರ ವಿತರಕರ ಶ್ರಮವಿರುತ್ತದೆ.