ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಒಕ್ಕೂಟದ ರಾರಯಲಿಗೂ ಮುನ್ನ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ (CM Revanth Reddy) ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ. ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.ರೇವಂತ್ ರೆಡ್ಡಿ ಗಂಭೀರ ಆರೋಪಗಳು!ಪ್ರಧಾನಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರೇವಂತ್ ರೆಡ್ಡಿ, ಜಾತಿ, ಧರ್ಮ, ಭಾಷೆ ಮತ್ತು ಪ್ರಾದೇಶಿಕ ರೇಖೆಗಳ ಮೂಲಕ ಜನರನ್ನು ವಿಭಜಿಸುವ ಮೂಲಕವೇ ಮೋದಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದಾರೆ ಎಂದು ಆರೋಪಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನವನ್ನು ರದ್ದುಗೊಳಿಸುವ ಉದ್ದೇಶದಿಂದಲೇ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗುರಿಯಾಗಿರಿಸಿಕೊಂಡಿತ್ತು ಎಂಬ ಕಾಂಗ್ರೆಸ್ನ ಹಳೆಯ ಆರೋಪವನ್ನು ಅವರು ಪುನರುಚ್ಚರಿಸಿದರು..