ಬೀದರ್ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಎಲ್ಕೆಜಿ, ಯುಕೆಜಿ ಶಿಕ್ಷಕರು ಮತ್ತು ಆಯಾಗಳಿಗೆ ಕಳೆದ 15 ತಿಂಗಳಿಂದ ವೇತನ ಪಾವತಿಯಾಗಿಲ್ಲ. 101 ಮಂದಿ ಸಿಬ್ಬಂದಿ ಜೀವನ ನಿರ್ವಹಣೆಗೆ ಪರದಾಡುತ್ತಿದ್ದು, ಪ್ರತಿದಿನ ಶಿಕ್ಷಣ ಇಲಾಖೆ ಕಚೇರಿಗೆ ಅಲೆದಾಡುತ್ತಿದ್ದಾರೆ. ಕೂಡಲೇ ವೇತನ ಬಿಡುಗಡೆ ಮಾಡುವಂತೆ ಸಚಿವರು ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಬೀದರ್, ನ.2: ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉಚಿತ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಸಿಗಬೇಕು ಹಾಗೂ ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದ ಪೋಷಕರಿಗೆ ಮುಕ್ತಿ ಸಿಗಬೇಕೆಂಬ ಸದುದ್ದೇಶದಿಂದ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾದ ಎಲ್ಕೆಜಿ (LKG) ಹಾಗೂ ಯುಕೆಜಿ (UKG) ತರಗತಿಗಳು ಇದೀಗ ಸಿಬ್ಬಂದಿಗಳ ಪಾಲಿಗೆ ಸಂಕಷ್ಟ ತಂದೊಡ್ಡಿವೆ.