ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಹರೀಶ್ ದ್ವಿವೇದಿ, ಅಸ್ಸಾಂ ಮಾದರಿ ಕಾರ್ಯತಂತ್ರದೊಂದಿಗೆ 2028ರ ವಿಧಾನಸಭೆ ಚುನಾವಣೆಗೆ ಸಜ್ಜಾಗುವಂತೆ ನಾಯಕರಿಗೆ ಕರೆ ನೀಡಿದ್ದು, ಇತ್ತೀಚಿನ ಎಂಎಲ್ಸಿ ಚುನಾವಣೆ ಗೆಲುವಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಕರ್ನಾಟಕ್ಕೆ ಭೇಟಿ ನೀಡಿರುವ ಹರೀಶ್ ದ್ವಿವೇದಿ ಅವರನ್ನು ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಬೆಂಗಳೂರು, ನವೆಂಬರ್ 02: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಹರೀಶ್ ದ್ವಿವೇದಿ ರಾಜ್ಯದ ನಾಯಕರಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.