ರಾಮನಗರದ ಬಿಡದಿ ಪುರಸಭೆಯಲ್ಲಿ ವ್ಯಾಪಕ ನಿರ್ಲಕ್ಷ್ಯ, ಅಕ್ರಮ ಆರೋಪಗಳು ಕೇಳಿಬಂದಿವೆ. ಪುರಸಭೆ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ಕೋಟ್ಯಾಂತರ ರೂ. ಮೌಲ್ಯದ ಸರ್ಕಾರಿ ವಾಹನಗಳು ಸಣ್ಣ ರಿಪೇರಿ ಇಲ್ಲದೆ ತುಕ್ಕು ಹಿಡಿಯುತ್ತಿವೆ. ಅಧಿಕಾರಿಗಳು ಖಾಸಗಿ ವಾಹನಗಳಿಗೆ ಬಾಡಿಗೆ ನೀಡಿ ಕಮಿಷನ್ ಪಡೆಯುತ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಕ್ರಮದ ಭರವಸೆ ನೀಡಿದ್ದಾರೆ. ರಾಮನಗರ, ನ.2: ಅದು ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಸ್ವಲ್ಪ ದೂರುದಲ್ಲಿರುವ ಬಿಡದಿ ಪುರಸಭೆ. ಇಡೀ ಪಟ್ಟಣವನ್ನು ಸ್ವಚ್ಛವಾಗಿಡಬೇಕಾದ ಪುರಸಭೆಯ ಮುಂಭಾಗದಲ್ಲೇ ರಾಶಿ ರಾಶಿ ಕಸ ಬಿದ್ದಿದ್ದರೂ ಕೇಳುವವರಿಲ್ಲ, ನೋಡುವವರಿಲ್ಲದ ಸ್ಥಿತಿ ನಿರ್ಮಾಣವಾಗಿದೆ.