ವಿಜಯವಾಣಿ ಸುದ್ದಿಜಾಲ ಕುಂದಾಪುರ ಇಂದಿನ ಎಐ ತಂತ್ರಜ್ಞಾನ ನಮ್ಮನ್ನು ಮೀರಿ ನಡೆಯುತ್ತಿದ್ದು, ಅದನ್ನು ಮೀರಿ ನಡೆಯುವ ಬೆಳವಣಿಗೆಗಳು ನಮ್ಮಲ್ಲಿ ಆಗಬೇಕು. ನಿಮ್ಮನ್ನು ನೀವು ಗುರುತಿಸಿಕೊಳ್ಳುವ ರೀತಿ. ನಿಮ್ಮನ್ನು ನೀವು ಗುರುತಿಸಿಕೊಳ್ಳುವ ರೀತಿಯ ಕೆಲಸ ಆಗಬೇಕು. ಪ್ರತಿಯೊಬ್ಬ ಪ್ರತಿಭಾವಂತ ವಿದ್ಯಾರ್ಥಿಗೂ ಶಿಕ್ಷಣದ ಜತೆಗೆ ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳೆಯಲು ಅವಕಾಶ ಕಲ್ಪಿಸಬೇಕು ಎಂದು ಸಂಗೀತ ನಿರ್ದೇಶಕ ರವಿ ಬಸ್ರೂರು ಹೇಳಿದರು. ಕೋಟೇಶ್ವರದ ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಗುರುಕುಲ ಕಾರ್ನಿವಲ್-ಮಕ್ಕಳ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು. ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ಜಂಟಿ ಕಾರ್ಯನಿರ್ವಾಹಕ ಕೆ.