ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಚಾರದ ಚರ್ಚೆ ನಡೆಯುತ್ತಿರುವಾಗಲೇ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಮಾ. ರಾಹುಲ್ ಗಾಂಧಿ ಭೇಟಿ ವೇಳೆ ಸಿದ್ದರಾಮಯ್ಯನವರ ಜೊತೆ ಪುತ್ರ ಮತ್ತು ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ವಿಡಿಯೋ ವಿಚಾರವಾಗಿ ರಾಹುಲ್ ಗಾಂಧಿಯವರ ಮುಂದೆ ಸಿದ್ದರಾಮಯ್ಯನವರು ತೀವ್ರ ಬೇಸರ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ನಿಮ್ಮ ಮಾತಿಗೆ ಗೌರವ ನೀಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ನಾನು ರಾಜೀನಾಮೆ ನೀಡಿದ ಮೇಲೆ ಆ ವಿಡಿಯೋ ಯಾಕೆ ಬಂತು, ಅದರ ಅವಶ್ಯಕತೆ ಏನಿತ್ತು.