ಗುರುಪುರ: 5 ಲಕ್ಷದವರೆಗಿನ ಕಾಮಗಾರಿಗಳಿಗೆ ಇ-ಪ್ರೊಕ್ಯೂರ್ಮೆಂಟ್ ಟೆಂಡರ್ ಬದಲಾಗಿ ಹಳೆಯ ಮಾದರಿಯಂತೆ ಮ್ಯಾನ್ಯುವಲ್ ಟೆಂಡರ್ ಕರೆಯಲು ಸರ್ಕಾರಕ್ಕೆ ಅನುಮತಿ ಕೋರಿ ಪತ್ರ ಬರೆಯಲು ಬಜ್ಪೆ ಪಟ್ಟಣ ಪಂಚ. ಶನಿವಾರ ಅಧ್ಯಕ್ಷ ಲೋಕೇಶ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ಇ-ಪ್ರೊಕ್ಯೂರ್ಮೆಂಟ್ ಪ್ರಕ್ರಿಯೆಯಿಂದಾಗಿ ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಹೀಗಾಗಿ 5 ಲಕ್ಷ ರೂ.ವರೆಗಿನ ಕಾಮಗಾರಿಗಳಿಗೆ ಹಿಂದಿನಂತೆಯೇ ಮ್ಯಾನ್ಯುವಲ್ ಟೆಂಡರ್ ಕರೆಯಲು ಅವಕಾಶ ನೀಡಬೇಕು ಎಂದು ಸದಸ್ಯರು ಆಗ್ರಹಿಸಿದರು.