IMD Forecast: Cyclone Murasu Bring Heavy Rain Across Andhra, Telangana and Karnataka Soon. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಎರಡರಿಂದ ಮೂರು ದಿನಗಳ ವರೆಗೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.ಪಶ್ಚಿಮ - ಮಧ್ಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಳ ಕೊಲ್ಲಿಯ ಮೇಲಿರುವ ತೀವ್ರ ಚಂಡಮಾರುತ ಮುರಸು (Murasu) ಕಳೆದ 6 ಗಂಟೆಗಳಲ್ಲಿ ಗಂಟೆಗೆ 22 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನತ್ತ ಚಲಿಸಿದೆ.