ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಹೊಸ ನಿಯಮ ಜಾರಿಗೊಳಿಸಿದ್ದಾರೆ. ದೇವರಗುಂದಿಯಿಂದ ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಗೆ ತೆರಳುವ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಟ್ಯಾಂಕರ್ಗಳ ನಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ವಾಹನಗಳು ಇನ್ನು ಮುಂದೆ ನೈಸ್ ರಸ್ತೆ ಹಾಗೂ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಮೂಲಕ ಸಂಚರಿಸಬೇಕು. ಆದರೆ, ನಗರದ ಪೆಟ್ರೋಲ್ ಬಂಕ್ಗಳಿಗೆ ಇಂಧನ ಪೂರೈಸುವ ವಾಹನಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.