ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳ ಇಂದಿನ ಗಾಳಿಯ ಗುಣಮಟ್ಟದ (AQI) ಸಂಪೂರ್ಣ ಮಾಹಿತಿ ಇಲ್ಲಿದೆ. ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ವಾಯು ಮಾಲಿನ್ಯ ಭೀತಿ ಹೆಚ್ಚಾಗಿದ್ದರೂ, ಸಿಲಿಕಾನ್ ಸಿಟಿಯಲ್ಲಿ ಗಾಳಿ ಸಾಧಾರಣ ಮಟ್ಟದಲ್ಲಿದ್ದು ಸಾರ್ವಜನಿಕರು ನಿರಾಳವಾಗಿದ್ದಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿಯ ಇಂದಿನ ಎಕ್ಯೂಐ ವಿವರ ಮತ್ತು ಆರೋಗ್ಯ ಮುನ್ನೆಚ್ಚರಿಕೆ ಕುರಿತ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಬೆಂಗಳೂರು, ನವೆಂಬರ್ 03: ದೇಶದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಭೀತಿ ಹೆಚ್ಚಾಗುತ್ತಿರುವ ನಡುವೆಯೇ, ಕರ್ನಾಟಕದ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ನವೆಂಬರ್ 3) ಗಾಳಿಯ ಗುಣಮಟ್ಟ ಸಾಧಾರಣ ಹಾಗೂ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ.