ಕರ್ನಾಟಕ ಹವಾಮಾನ ಮುನ್ಸೂಚನೆ: ಬಂಗಾಳ ಕೊಲ್ಲಿಯಲ್ಲಿ ಮುರಸು ಚಂಡಮಾರುತ ತೀವ್ರಗೊಂಡು ಆಂಧ್ರಪ್ರದೇಶದತ್ತ ಮುನ್ನುಗ್ಗುತ್ತಿದೆ. ಇದರ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಹಾಗೂ ಬಿರುಗಾಳಿ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಲ್ಲೆಲ್ಲಿ ಗುಡುಗು ಮಿಂಚಿನ ಅಬ್ಬರ ಇರಲಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರು, ನವೆಂಬರ್ 3: ಬಂಗಾಳ ಕೊಲ್ಲಿಯಲ್ಲಿ ಮುರಸು ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದತ್ತ ಮುನ್ನುಗ್ಗುತ್ತಿದೆ. ಇದರ ಪರಿಣಾಮ ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.