ಕೊಪ್ಪಳ : ರಾಜ್ಯದ ಸರಕಾರಿ, ಸ್ವಾಯತ್ತ ಹಾಗೂ ಖಾಸಗಿ ಸಂಸ್ಥೆಗಳು ತಮ್ಮ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕೆಂಬ ರಾಜ್ಯ ಸರಕಾರದ ಆದೇಶ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿನ ಅನೇಕ ಮಾಲ್ಗಳು, ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಖಾಸಗಿ ಸಂಸ್ಥೆಗಳು ನಿಯಮ ಉಲ್ಲಂಘನೆಯ ಆರೋಪ ಎದುರಿಸುತ್ತಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತವರು ಜಿಲ್ಲೆ ಕೊಪ್ಪಳದಲ್ಲೇ ಈ ಪರಿಸ್ಥಿತಿ ಇರುವುದಕ್ಕೆ ಸ್ವಾಭಿಮಾನಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.