ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗ ಪ್ರಮಾಣದ ಮಾಹಿತಿ ನೀಡಲು ಕಂಪನಿಗಳಿಗೆ 1 ವಾರದ ಗಡುವು ನೀಡಲಾಗಿದೆ ಎಂದು ತಿಳಿಸಿರುವ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ, ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದ ಬಗ್ಗೆ ಕರವೇ ಮುಖಂಡರು ಭೇಟಿ ನೀಡಿ ಮಾಹಿತಿ ಸಂಗ್ರಹಕ್ಕೆ ವಿರೋಧ ವ್ಯಕ್ತಪಡಿಸಿ ಕ್ರಮಕೈಗೊಳ್ಳುವಂತೆ ಸಿಎಂಗೆ ಆಗ್ರಹಿಸಿದ್ದ ಉದ್ಯಮಿ ಮೋಹನ ದಾಸ್ ಪೈ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು, ನವೆಂಬರ್ 03: ಮೋಹನ ದಾಸ್ ಪೈ ಸುಮ್ಮನಿರಲ್ಲ ಅಂದ್ರೆ ತಕ್ಕ ಪಾಠ ಕಲಿಸಬೇಕಾಗುತ್ತೆ. ಅವರು ಕರ್ನಾಟಕದಲ್ಲಿ ಇರುವ ಶಕುನಿ ರೀತಿ ಆಗಿದ್ದಾರೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆರೋಪಿಸಿದ್ದಾರೆ.