ಕರಿಕಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ ವಿಜಯಲಕ್ಷ್ಮಿ ಅವರು, ದರ್ಶನ್ ಅವರ ಬೆನ್ನುನೋವಿನ ಸಮಸ್ಯೆ ಶಮನವಾಗಿ, ಶೀಘ್ರದಲ್ಲೇ ಅವರಿಗೆ ಜಾಮೀನು ಸಿಗಲಿ ಎಂದು ಪ್ರಾರ್ಥಿಸಿದರು. ಅಷ್ಟೇ ಅಲ್ಲದೆ, ಜಾಮೀನು ದೊರೆತು ದರ್ಶನ್ ಜೈಲಿನಿಂದ ಹೊರಬಂದ ನಂತರ ಪತಿ ಸಮೇತ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ. ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರಿಗೆ ಬೆನ್ನುನೋವಿನ ಸಮಸ್ಯೆ ತೀವ್ರಗೊಂಡಿರುವ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮಿ ಅವರು ಪತಿಯ ಆರೋಗ್ಯ ಸುಧಾರಣೆ ಹಾಗೂ ಶೀಘ್ರ ಬಿಡುಗಡೆಗಾಗಿ ದೇವರ ಮೊರೆ ಹೋಗಿದ್ದಾರೆ.