ಬಿಸಿಸಿಐ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಿದೆ. ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಭುವನೇಶ್ವರ್ ಕುಮಾರ್ ಭಾರತ ತಂಡಕ್ಕೆ ಎಂಟ್ರಿ ಆಗಿದ್ದಾರೆ. ಭುವಿ ಎಂಟ್ರಿ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಒಂದು ಕಾಲದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ಆಗಿದ್ದ ಭುವಿ 2022ರ ನವೆಂಬರ್ನಲ್ ಕೊನೆಯಬಾರಿಗೆ ಆಡಿದ್ದರು. ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಪರ ಭುವಿ ಬೌಲಿಂಗ್ ಮಾಡಿದ್ದರು. ಈ ಮತ್ತೆ ತಂಡಕ್ಕೆ ಮರಳಿದ್ದಾರೆ. ಇಂದು ಗುವಾಹಟಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಮಹತ್ವದ ಸಭೆ ನಡೆಸಿತು.