-ಶ್ರವಣ್ಕುಮಾರ್ ನಾಳ, ಮಂಗಳೂರುಮಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ನಿರ್ದೇಶನದಂತೆ ದ.ಕ ಜಿಲ್ಲೆಯ 21 ಮೆಟ್ರಿಕ್ ಪೂರ್ವ ಮತ್ತು 63 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಗಾಂಧೀಜಿಯವರ ಸ್ವಚ್ಛತೆ ಕುರಿತು ಚಿಂತನೆ ಹಾಗೂ ಸ್ವಚ್ಛ ಪರಿಸರದ ಮಹತ್ವವನ್ನ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.