Maldives: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಲ್ಡೀವ್ಸ್ ಮಾಜಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳವಾರ(ನ. 03). 03) ವರದಿಯಾಗಿದೆ.ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಮಾಲ್ಡೀವ್ಸ್ ಪೊಲೀಸರು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನ್ಯಾಯಾಲಯದ ವಾರಂಟ್ ಆಧಾರದ ಮೇಲೆ 64 ವರ್ಷದ ಅಬ್ದುಲ್ಲಾ ಅವರನ್ನು ನವೆಂಬರ್ 2 ರಂದು ರಾತ್ರಿ 9.59ಕ್ಕೆ ಬಂಧಿಸಲಾಗಿದೆ. ಅಬ್ದುಲ್ಲಾ ಶಾಹಿದ್ ಅವರು ಈ ಹಿಂದೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರಾಗಿದ್ದರು.