ನವದೆಹಲಿ: ವಿದೇಶಿ ಸಹಾಯದಿಂದ ಪ್ರಧಾನಿಯಾಗಿ, ಅದೇ ವಿದೇಶಿ ನೆರವಿನಿಂದ ಅಧಿಕಾರದಲ್ಲಿ ಉಳಿದಿದ್ದೀರಿ ಬೇಕಾದರೇ ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ನಾಯಕ ರ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, ಉನ್ನತಮಟ್ಟದ ಚರ್ಚೆ ಪ್ರಬುದ್ಧ ವ್ಯಕ್ತಿಗಳ ನಡುವೆ ನಡೆಯುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಹೇಳಿಕೆ, ಇಸ್ಲಾಮಿಕ್ ಮೂಲಭೂತವಾದಿಗಳು ಜಾತ್ಯತೀತತೆಯ ಬಗ್ಗೆ ಮಾತನಾಡುವ ರೀತಿಯಿದೆ ಎಂದು ವ್ಯಂಗ್ಯವಾಡಿದ್ದಾರೆ. ಮತ್ತು ಇತರರು ವಿದೇಶಿ ಬೆಂಬಲ ಪಡೆಯುತ್ತಿದ್ದಾರೆ ಎಂದು ಆರೋಪಿಸುವುದು ಸ್ವತಃ ತಮಗೇ ಅಪಹಾಸ್ಯ ಮಾಡಿಕೊಂಡಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.