ಬೆಂಗಳೂರಿನ ಹೊಯ್ಸಳ ನಗರದ ಪಬ್ವೊಂದರಲ್ಲಿ ಅಡುಗೆಮನೆಯ ಚಿಮಣಿ ಅತಿಯಾಗಿ ಬಿಸಿಯಾದ ಕಾರಣ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳೀಯರ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ದಳದ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ನಂದಿಸಲಾಯಿತು. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಹಾನಿ ಸಂಭವಿಸಿಲ್ಲ. ಬೆಂಗಳೂರು, ನವೆಂಬರ್ 4: ಬೆಂಗಳೂರಿನ ಹೊಯ್ಸಳ ನಗರದಲ್ಲಿರುವ ಪಬ್ವೊಂದರಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪಬ್ನ ಅಡುಗೆಮನೆಯ ಚಿಮಣಿ ಅತಿಯಾಗಿ ಬಿಸಿಯಾದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಈ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.