ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ನವೆಂಬರ್ 4 ಮತ್ತು 5ರಂದು ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಹಾಗೂ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯ ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲೂ ನವೆಂಬರ್ 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ನವೆಂಬರ್ 4: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 4 ಮತ್ತು 5ರಂದು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.