ಇಂದು (ನವೆಂಬರ್ 03) ಸಿಎಂ ಡಿಕೆ ಶಿವಕುಮಾರ್ ಹಿರಿಯೂರು ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿಯ ಸುಳಿವು ನೀಡಿದ್ದಾರೆ. ಹೌದು...ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಇಂದು ಗೆಳೆಯ ಸುಧಾಕರ್ ಇದ್ದಿದ್ರೆ ಸಂಭ್ರಮಾಚರಣೆ ಮಾಡಬಹುದಿತ್ತು. ನೀವು ಸುಹಾಸ್ ಅವರನ್ನು ಅತೀ ಹೆಚ್ಚು ಮತ ಕೊಟ್ಟು ಆಯ್ಕೆ ಮಾಡ್ತೀರಿ ಎಂದು ಹೇಳಿದ್ದಾರೆ. ಈ ಮೂಲಕ ಮುಂಬರುವ ಉಪಚುನಾವಣೆ ಟಿಕೆಟ್ ಡಿ ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಖಚಿತವಾದಂತಾಗಿದೆ.