ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಚುನಾವಣಾ ವ್ಯವಸ್ಥೆ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಎಂದು ಮಾಜಿ ಉ. ಈ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆ ನಡೆಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಮತದಾರರ ಪಟ್ಟಿಯಿಂದ ಮುಸ್ಲಿಮರು, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದವರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಧರ್ಮ, ಜಾತಿ, ಆರ್ಥಿಕ ಸ್ಥಿತಿ ಪರಿಗಣಿಸಲ್ಲ ಎಂದರು.ಚುನಾವಣೆಯಲ್ಲಿ ಗೆದ್ದಾಗ ಇವಿಎಂ ಹಾಗೂ ಚುನಾವಣಾ ಆಯೋಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸದ ಕಾಂಗ್ರೆಸ್, ಸೋತಾಗ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದೆ.