ಶಿವಮೊಗ್ಗ: ಸರ್ಕಾರಿ ಶಾಲೆಗಳ ಮೂಲ ಸೌಕರ್ಯಗಳ ಅಭಿವೃದ್ಧಿ, ಆಧುನಿಕ ಪಠ್ಯ ಹಾಗೂ ಪಠ್ಯೇತರ ವಸ್ತುಗಳ ಪೂರೈಕೆಗೆ ಆ ಶಾಲೆಗಳ ಹಳೆಯ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು, ಕಾರ್ಪೋರೇಟ್ ಕಂಪನಿಗಳು ಕೈ ಜೋ. ರಾಜ್ಯದಲ್ಲಿರುವ ಕಂಪನಿಗಳು ಅವುಗಳ ಪಾಲಿನ ಸಿಎಸ್ಆರ್ ನಿಧಿಯನ್ನು ಇಲ್ಲಿಯ ಶಾಲೆಗಳ ಅಭಿವೃದ್ಧಿಗೆ ಬಳಸಲಿ ಎಂದು ಒತ್ತಾಯಿಸಿದರು..ಕೈಗಾರಿಕೋದ್ಯಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಸೋಮವಾರ ನಮ್ಮ ಶಾಲೆ ನಮ್ಮ ಜವಾಬ್ದಾರಿ ಹಾಗೂ ಸಿಎಸ್ಆರ್ ನಿಧಿ ಬಳಕೆ ಕುರಿತು ಸಭೆ ನಡೆಸಿದ ಅವರು, ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಸಿಎಸ್ಆರ್ ನಿಧಿಯನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪಡೆಯುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು..