ಶಿವಮೊಗ್ಗದ ಜಯನಗರದ ಕಿಡ್ಸ್ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ಭಾರೀ ಪ್ರಮಾಣದ ಅಕ್ರಮ ಪಟಾಕಿ ದಾಸ್ತಾನು ಪತ್ತೆಯಾಗಿದೆ. ಎಸಿ ಮೈತ್ರಿ ನೇತೃತ್ವದಲ್ಲಿ ದಾಳಿ ನಡೆಸಿ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಮಕ್ಕಳ ಸುರಕ್ಷತೆಗೆ ಅಪಾಯಕಾರಿಯಾಗಿದ್ದ ಈ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪಟಾಕಿಗಳನ್ನು ಸಂಗ್ರಹಿಸಲು ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಶಿವಮೊಗ್ಗ, ನವೆಂಬರ್ 5: ಶಿವಮೊಗ್ಗದ ಜಯನಗರದ ಎರಡನೇ ಕ್ರಾಸ್ನಲ್ಲಿರುವ ಕಿಡ್ಸ್ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ಭಾರೀ ಪ್ರಮಾಣದ ಅಕ್ರಮ ಪಟಾಕಿ ದಾಸ್ತಾನು ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಎಸಿ ಮೈತ್ರಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಅಪಾರ ಪ್ರಮಾಣದ ಪಟಾಕಿಗಳನ್ನು ಜಪ್ತಿ ಮಾಡಿದ್ದಾರೆ.