ಬೆಂಗಳೂರು: ಪತ್ನಿಯು ಸ್ವಂತ ಸಂಪಾದನೆಯಿಂದ ಕುಟುಂಬ ಹಾಗೂ ಪಾಲಕರ ನಿರ್ವಹಣೆ ಮಾಡುತ್ತಿರುವಾಗ, ಆಕೆ ಆರ್ಥಿಕವಾಗಿ ಪತಿಯ ಮೇಲೆ ಅವಲಂಬಿತಳಾಗಿದ್ದಾಳೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹಾಗೆಯೇ, ಪತಿಯ. ಹಾಗೆಯೇ, ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.ಚಿಕ್ಕಮಗಳೂರಿನ ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂ. ಜೀವನಾಂಶ ನೀಡುವಂತೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರಿನ ಇಂಜಿನಿಯರ್ ಶುಭ್ರತ್ ಎ.ಆರ್. ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಚಿಲ್ಲಾಕೂರ್ ಸುಮಲತಾ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.ಆರ್ಥಿಕ ಸ್ವಾವಲಂಬನೆ ಮತ್ತು ಉದ್ಯೋಗದ ಸಾಮರ್ಥ್ಯವು ಪತ್ನಿಯ ಜೀವನಾಂಶದ ಬೇಡಿಕೆಯನ್ನು ತಿರಸ್ಕರಿಸಲು ಸೂಕ್ತ ಆಧಾರವಾಗಿರಲಿದೆ ಎಂದು ಆದೇಶಿಸಿದ್ದು, ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.