ರಣಬೀರ್ ಕಪೂರ್ ಅವರ ವೃತ್ತಿಜೀವನದ ಅತಿ ಮುಖ್ಯ ಚಿತ್ರವಾಗಿ ‘ರಾಮಾಯಣ’ ಮೂಡಿಬಂದಿದೆ. ಇದು ಅವರ ಪತ್ನಿ ಆಲಿಯಾ ಭಟ್ ಹಾಗೂ ಇಡೀ ಕುಟುಂಬಕ್ಕೆ ಹೆಮ್ಮೆಯ ವಿಷಯವಾಗಿದೆ. ಸಿನಿಮಾ ಬಿಡುಗಡೆ ಆದ ಬಳಿಕ ಆಲಿಯಾ ಭಟ್ ಅವರು ಹೆಮ್ಮೆಯಿಂದ ಕೆಲವು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಬಿಗ್ ಬಜೆಟ್ ಸಿನಿಮಾ ‘ರಾಮಾಯಣ’ ಬಿಡುಗಡೆಯಾಗಿದೆ. ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅದ್ಭುತ ನಟನೆಯಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ರಣಬೀರ್ ಅವರ ಪತ್ನಿ ಹಾಗೂ ನಟಿ ಆಲಿಯಾ ಭಟ್ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಿನಿಮಾದ ಸೆಟ್ನಿಂದ ಅಪರೂಪದ ಫೋಟೋಗಳನ್ನು ಹಂಚಿಕೊಂಡು ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.