ನಟ ದಳಪತಿ ವಿಜಯ್ ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ. ಸಿಎಂ ಆದ ಬಳಿಕ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ ಅವರು ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಹಾಗಂತ ಅವರು ಸಿನಿಮಾದಲ್ಲಿ ನಟಿಸಲ್ಲ. ಸರ್ಕಾರಿ ಯೋಜನೆಗಳ ಪ್ರಚಾರಕ್ಕಾಗಿ ನಟಿಸಲು ಮನಸ್ಸು ಮಾಡಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಖ್ಯಾತ ನಟ ದಳಪತಿ ವಿಜಯ್ ಅವರು ಪ್ರಸ್ತುತ ರಾಜ್ಯದ ಆಡಳಿತಾತ್ಮಕ ಕೆಲಸಗಳಲ್ಲಿ ಸಂಪೂರ್ಣವಾಗಿ ನಿರತರಾಗಿದ್ದಾರೆ. ರಾಜಕೀಯ ಪ್ರವೇಶದ ವೇಳೆಯೇ ಸಿನಿಮಾಗಳಿಂದ ನಿವೃತ್ತಿ ಘೋಷಿಸಿದ್ದ ವಿಜಯ್, ಮತ್ತೆ ಬಣ್ಣ ಹಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.