ಬಾಲಿವುಡ್ನ ಖ್ಯಾತ ಡಿಸೈನರ್ ಮನಿಷ್ ಮಲ್ಹೋತ್ರಾ ಆಯೋಜಿಸಿದ್ದ ದೀಪಾವಳಿ ಪಾರ್ಟಿಯಲ್ಲಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ದೀರ್ಘಕಾಲದ ಬಳಿಕ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಕುಮಾರ್, ಕರೀನಾ ಕಪೂರ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಈ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ. ಹಬ್ಬದ ಸೀಸನ್ ಆರಂಭವಾಗಿದ್ದು, ಬಾಲಿವುಡ್ ಸೆಲೆಬ್ರಿಟಿಗಳು ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ. ಗುರುವಾರ ಸಂಜೆ ಖ್ಯಾತ ಫ್ಯಾಷನ್ ಡಿಸೈನರ್ ಮನಿಷ್ ಮಲ್ಹೋತ್ರಾ ತಮ್ಮ ವಾರ್ಷಿಕ ದೀಪಾವಳಿ ಪಾರ್ಟಿಯನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ದೀರ್ಘಕಾಲದ ಬಳಿಕ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕ್ಯಾಮೆರಾ ಕಣ್ಣಿಗೆ ಒಟ್ಟಾಗಿ ಪೋಸ್ ನೀಡಿದ್ದಾರೆ.